ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ…

261
firstsuddi

ಬೆಂಗಳೂರು : ಹಾಲು ಒಕ್ಕೂಟದ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಹಾಲು ಒಕ್ಕೂಟ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದು, ಇವರ ವಿರುದ್ಧ ಯಾರೂ ನಾಮಪತ್ರ ಸಲ್ಲಿಸದ ಕಾರಣ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರಿಗೆ ಕಾಂಗ್ರೆಸ್‍ನ 6, ಜೆಡಿಎಸ್‍ನ 1, ಬಿಜೆಪಿಯ ಓರ್ವ ನಿರ್ದೇಶಕರು ಸೇರಿದಂತೆ ಒಟ್ಟು 11ಮಂದಿ ನಿರ್ದೇಶಕರು ಬೆಂಬಲಕ್ಕೆ ನಿಂತಿದ್ದರು. ಜುಲೈ 29ರಂದು ನಡೆಯಬೇಕಿದ್ದ ಕೆಎಂಎಫ್ ಅಧ್ಯಕ್ಷ ಚುನಾವಣೆ ಮುಂದೂಡಿಕೆಯಾದ ಹಿನ್ನೆಲೆ, ಬಾಲಚಂದ್ರ ಜಾರಕಿಹೊಳಿ ಅವರಿಗೆ ಈ ಅದೃಷ್ಟ ಒಲಿದಿದೆ ಎನ್ನಲಾಗಿದೆ.