ಹಾವೇರಿಯಲ್ಲಿ ಅಮಾನವೀಯ ಘಟನೆ.. ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರ…

68
firstsuddi

ಹಾವೇರಿ : ಹದಿನೆಂಟು ವರ್ಷದ ವಿಶೇಷಚೇತನ ಯುವತಿ ಮೇಲೆ ಇಬ್ಬರು ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದಿದೆ.

ಆರೋಪಿಗಳನ್ನು ಪರಶುರಾಮ ಮಡಿವಾಳರ ಮತ್ತು ಯಶವಂತ ಎಂದು ಗುರುತಿಸಲಾಗಿದೆ. ಯುವತಿಯ ಬಾಯಿಗೆ ಬಟ್ಟೆ ತುರುಕಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಆರೋಪಿ ಯಶವಂತಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರ ಮಾಡಲು ಪರಶುರಾಮಗೆ ಯಶವಂತ ಸಹಕಾರ ನೀಡಿದ್ದಾನೆ ಎನ್ನಲಾಗಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.