ಹಾವೇರಿಯಲ್ಲಿ ಮತ್ತೊಂದು ನೈತಿಕ ಪೊಲೀಸಗಿರಿ- ಹಿಂದೂ ವ್ಯಕ್ತಿಯೊಂದಿಗೆ ಬೈಕ್‌ನಲ್ಲಿ ಬಂದಿದ್ದಕ್ಕೆ ಮುಸ್ಲಿಂ ಯುವತಿ ಮೇಲೆ ಹಲ್ಲೆ…

66
firstsuddi

ಹಾವೇರಿ: ಹಾನಗಲ್ ನೈತಿಕ ಪೊಲೀಸ್ ಗಿರಿ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ.

ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವತಿಯ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವತಿ ಬ್ಯಾಡಗಿ ತಾಲೂಕು ಅಗಸನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದರು. ತಮ್ಮ ಜೊತೆ ಕೆಲಸ ಮಾಡ್ತಿದ್ದ ಜಗದೀಶ್ ಎಂಬ ವ್ಯಕ್ತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಬ್ಯಾಡಗಿಗೆ ತನ್ನ ಅಕ್ಕನ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪಟ್ಟಣದ ಪುರಸಭೆ ಬಳಿ ಇರುವ ಈಶ್ವರ ದೇವಸ್ಥಾನದ ಬಳಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ. ನೀನು ಯಾಕೆ ಇವನ ಜೊತೆ ಬೈಕ್ ನಲ್ಲಿ ಬಂದೆ? ಎಂದು ಪ್ರಶ್ನಿಸಿ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಯುವತಿಯನ್ನ ಎಳೆದಾಡಿ ಕಪಾಳಕ್ಕೆ ಹೊಡೆದು ಸಾರ್ವಜನಿಕ ಸ್ಥಳದಲ್ಲಿ ಅವಮಾನ ಮಾಡಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆಂದು ಆಕೆ ಪ್ರಕರಣ ದಾಖಲಿಸಿದ್ದಾರೆ.

ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ, 7 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್‍ಪಿ ಪಾಟೀಲ ನೇತೃತ್ವದಲ್ಲಿ ತನಿಖೆ ನಡೆಸಿದ್ದಾರೆ.