ಹಾಸನ :- ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿಂದು 4 ಹೊಸ ಅಂಬುಲೆನ್ಸ್‍ಗಳಿಗೆ ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭವಾನಿ ರೇವಣ್ಣ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ವತಿಯಿಂದ 4 ಆಂಬುಲೆನ್ಸ್ ಗಳನ್ನು ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಸೀಕೆರೆ ಹಾಗೂ ಸಕಲೇಶಪುರ ತಾಲ್ಲೂಕುಗಳಿಗೆ ನೀಡಲಾಗುತ್ತಿದೆ ಎಂದರು. ನಾಲ್ಕು ಅಂಬುಲೆನ್ಸ್‍ಗಳಲ್ಲಿ ಎರಡು ಅಂಬುಲೆನ್ಸ್‍ಗಳಿಗೆ ವೆಂಟಿಲೇಟರ್ ಅಳವಡಿಸಲಾಗಿದೆ ಹಾಸನದಿಂದ ಚೆನ್ನೈ ವರೆಗೂ ರೋಗಿಗಳನ್ನು ಕೊಂಡೊಯ್ಯಬಹುದು ಎಂದರು.
ಈ ವೇಳೆಯಲ್ಲಿ ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಹೆಚ್.ಡಿ. ರೇವಣ್ಣ ,ಹೆಚ್.ಕೆ. ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಟೇಲ್ ಶಿವಣ್ಣ,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ. ಭಾರತಿ, ಉಪಕಾರ್ಯದರ್ಶಿ ಎಂ.ಸಿ. ಚಂದ್ರಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಹಾಗೂ ಮತ್ತಿತರರು ಹಾಜರಿದ್ದರು










