ಹಾಸನ : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ಹಾಸನ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಕಳೆದ ಒಂದು ತಿಂಗಳಿಂದ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು ನಿನ್ನೆ ಮತದಾನ ಮುಗಿದ ಬಳಿಕ ಇಂದು ಚೇತರಿಸಿಕೊಂಡು ಅವರು ತಮ್ಮ ಹಾಸನದ ಮನೆಯಲ್ಲಿ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಮಾತನಾಡುತ್ತ ಕಾಲ ಕಳೆಯುತ್ತಿದ್ದು, ಯಾವ ಯಾವ ಬೂತ್‍ನಲ್ಲಿ ತಮ್ಮ ಪಕ್ಷಕ್ಕೆ ಎಷ್ಟು ಮತದಾನ ಆಗಿರಬಹುದು ಎಂದು ಲೆಕ್ಕಾಚಾರ ಮಾಡುತ್ತಿದ್ದರು. ಯಾವಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಲೀಡ್ ಬರಬಹುದು ಹಾಗೂ ಎಲ್ಲಿ ಕಡಿಮೆ ಆಗಬಹುದು ಎಂಬ ಮಾಹಿತಿಯನ್ನು ಸಂಗ್ರಹಿಸುತ್ತಿದ್ದರು.










