ಹಾಸನ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡಿ ಸೋಲು ಅನುಭವಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಬದುಕರಹಳ್ಳಿ ಗ್ರಾಮದಲ್ಲಿ ನಡೆದಿದೆ. ಲತೇಶ್ ಕುಮಾರ್ ಮೃತ ದುರ್ಧೈವಿ. ಹಾಸನದ ರಾಜೀವ್ ಕಾಲೇಜಿನಲ್ಲಿ ಲತೇಶ್ ಕುಮಾರ್ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದು, ಕ್ರಿಕೆಟ್ ಬೆಟ್ಟಿಂಗ್ ಹಣವನ್ನು ನೀಡುವಂತೆ ಬುಕ್ಕಿ ಪೀಡಿಸುತ್ತಿದ್ದರಿಂದ ಭಯದಿಂದ ಮೂರು ದಿನಗಳ ಹಿಂದೆ ವಿಷ ಸೇವಿಸಿ ಅಸ್ವಸ್ಥನಾಗಿದ್ದ ಎಂದು ತಿಳಿದು ಬಂದಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.










