ಹಾಸನ : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿ ಬಳಿ ನಡೆದಿದೆ. ಉಮೇಶ್(23) ಹಾಗೂ ಹರೀಶ್(22) ಮೃತ ದುರ್ಧೈವಿಗಳು ಎನ್ನಲಾಗಿದ್ದು, ನಿನ್ನೆ ರಾತ್ರಿ ಹಾಸನದಿಂದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯಾದ ಕಾರು ಅನಿಲ್ ಎಂಬುವವರಿಗೆ ಸೇರಿದ್ದು, ವಿಷಯ ತಿಳಿಯುತ್ತಿದ್ದಂತೆ ಅನಿಲ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










