ಹಾಸನ : ಗೂಡ್ಸ್ ಆಟೋಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮೂಡನಹಳ್ಳಿ ಬಳಿ ನಡೆದಿದೆ. ಗೂಡ್ಸ್ ಆಟೋ ಬಾಣಾವರದಿಂದ ಚನ್ನರಾಯಪಟ್ಟಣ ಸಂತೆಗೆ ರಾಸುಗಳನ್ನು ತರುತ್ತಿದ್ದ ವೇಳೆ ಅರಸೀಕೆರೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮಂಜಿನಿಂದ ರಸ್ತೆ ಕಾಣದೆ ಎದುರಿಗೆ ಸಾಗುತ್ತಿದ್ದ ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಆಟೋದಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ರವಾನಿಸಲಾಗಿದ್ದು, ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










