ಹಾಸನ : ಚಾಲಕನ ನಿಯಂತ್ರಣ ತಪ್ಪಿ ಜೋಳದ ಹೊಲಕ್ಕೆ ಉರುಳಿ ಬಿದ್ದ ಬಸ್-10ಕ್ಕೂ ಹೆಚ್ಚು ಮಂದಿಗೆ ಗಾಯ…

300
firstsuddi

ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ರಸ್ತೆಯಿಂದ ಜೋಳದ ಹೊಲಕ್ಕೆ ಉರುಳಿ ಬಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚೌಡೇನಹಳ್ಳಿಯಲ್ಲಿ ನಡೆದಿದೆ. ಹಾಸನದ ಬಸ್ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚಾಲಕ ಇಳಿಜಾರಿನಲ್ಲಿ ಬಸ್ ನ್ಯೂಟ್ರಲ್ ಮಾಡಿಕೊಂಡು ತೆರಳುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೇ ಜೋಳದ ಹೊಲಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟಾವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳು ಪ್ರಯಾಣಿಕರನ್ನು ಚನ್ನರಾಯಪಟ್ಟಣ ಹಾಗೂ ಉದಯಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎನ್ನಲಾಗಿದ್ದು, ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.