ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಕಾರು, ವೃದ್ಧೆ ಸಾವು…

152
firstsuddi

ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ನುಗ್ಗಿ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರಿನ ವಿಷ್ಣುಸಮುದ್ರ ಕೆರೆ ಬಳಿ ನಡೆದಿದ್ದು, ಬಸುಬ್ಬಿ (55) ಮೃತ ದುರ್ಧೈವಿ. ಒಂದೇ ಕುಟುಂಬದ ಮೂವರು ಬೆಳಗ್ಗೆ 5.30ರ ವೇಳೆಗೆ ಅರೇಹಳ್ಳಿಯಿಂದ ಹುಬ್ಬಳ್ಳಿಗೆ ವಿವಾಹಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಗುದ್ದಿ ಕೆರೆಗೆ ಬಿದ್ದಿದ್ದನ್ನು  ಗಮನಿಸಿದ ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಘಟನೆ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.