ಹಾಸನ ಜಿಲ್ಲಾ ಉಸ್ತವಾರಿಯಿಂದ ಬಿಡುಗಡೆ ಮಾಡುವಂತೆ ಕೋರಿ ಪತ್ರ ನೀಡಿದ್ದೇನೆ: ಸಚಿವ ಕೆ.ಎನ್ ರಾಜಣ್ಣ

34

ಹಾಸನ: ಹಾಸನ ಜಿಲ್ಲಾ ಉಸ್ತವಾರಿಯಿಂದ ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಕೊಟ್ಟಿದ್ದೇನೆ. ನನ್ನ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿಬೇಕಿದೆ. ಹೀಗಾಗಿ, ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೆಲಸ ಮಾಡಬೇಕಿದೆ. ನಾನು ಯಾವ ಜಿಲ್ಲೆಗೂ ಉಸ್ತುವಾರಿ ಕೊಡಿ ಎಂದು ಕೇಳುವುದಿಲ್ಲ ಎಂದು ದೆಹಲಿಯಲ್ಲಿ ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ದಲಿತ ಸಚಿವರಿಂದ ಪ್ರತ್ಯೇಕ ಸಮಾವೇಶದ ಅಗತ್ಯವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾನು ಎಸ್‍ಟಿ ಸಮುದಾಯದ ಮತಗಳಿಂದ ಮಾತ್ರ ಗೆದ್ದಿಲ್ಲ. ಎಲ್ಲ ಸಮುದಾಯದ ಆಶೀರ್ವಾದ ಬೇಕು. ಕಾಂಗ್ರೆಸ್‍ಗೆ ಯಾವ ಸಮಾವೇಶ ಮಾಡಿದರೆ ಒಳ್ಳೆಯದೋ, ಆ ಸಮಾವೇಶ ಮಾಡಬೇಕು. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು. ಸಮಾವೇಶದ ಅಗತ್ಯವನ್ನು ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇವೆ. ಕೇಂದ್ರದ ನಾಯಕರನ್ನು ಸಮಾವೇಶಕ್ಕೆ ಕರೆಸುತ್ತೇವೆ. ಮುಂದಿನ ದಿನಗಳಲ್ಲಿ ಸಮಾವೇಶಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ. ಚಿತ್ರದುರ್ಗ, ದಾವಣಗರೆ ಅಥವಾ ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಯುತ್ತದೆ. ಪಕ್ಷ ಗಟ್ಟಿಯಾದರೆ ಸಿದ್ದರಾಮಯ್ಯನವರು ಇರುತ್ತಾರೆ ಎಂದು ತಿಳಿಸಿದರು.