ಹಾಸನ : ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಪತಿ…

243
firstsuddi

ಹಾಸನ : ಪತ್ನಿಯ ನಡತೆಯನ್ನು ಶಂಕಿಸಿ ಪತಿ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕಾಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ(25) ಮೃತ ದುರ್ದೈವಿ ಹಾಗೂ ಆರೋಪಿ ಪತಿಯನ್ನು ಗಂಗಾಧರ್ ಎಂದು ಗುರುತಿಸಲಾಗಿದೆ. ಪತಿ ಗಂಗಾಧರ್ ಅವರು ಪತ್ನಿ ಪೂಜಾ ಅವರ ನಡತೆ ಬಗ್ಗೆ ಅನುಮಾನಿಸಿ ಪ್ರತಿದಿನ ಪತ್ನಿಯೊಂದಿಗೆ ಜಗಳವಾಡುತ್ತಿದ್ದರು. ಅದರಂತೆ ನಿನ್ನೆ ರಾತ್ರಿಯೂ ಕೂಡಾ ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಪತಿ ಗಂಗಾಧರ್ ಸಿಟ್ಟಿನಿಂದ ಪೂಜಾ ಅವರನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ವಿಷಯ ತಿಳಿದ ಆರೋಪಿ ಗಂಗಾಧರ್ ಅವರ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.