ಹಾಸನ : ಬೋರ್‍ವೆಲ್ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

149
firstsuddi

ಹಾಸನ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಂದೂರು ಬೋವಿ ಕಾಲೋನಿಯಲ್ಲಿ ನಡೆದಿದೆ. ಬಂದೂರು ಗ್ರಾಮದಲ್ಲಿ ನೀರಿನ ಸಮಸ್ಯೆಯಿದ್ದು, ಇದರಿಂದ ಗ್ರಾಮಸ್ಥರು ಬೋರ್‍ವೆಲ್ ನಿಂದ ಬರುತ್ತಿದ್ದ ಕಲುಷಿತ ನೀರನ್ನೇ ಕುಡಿಯುತ್ತಿದ್ದರು. ಇಂದು ಕೂಡಾ ಗ್ರಾಮಸ್ಥರು ಬೋರ್‍ವೆಲ್ ನ ಕಲುಷಿತ ನೀರನ್ನೇ ಸೇವಿಸಿದ್ದು, ಪರಿಣಾಮ ವೃದ್ಧರು, ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೀರಿನ ಸಮಸ್ಯೆ ಬಗ್ಗೆ ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸ್ಪಂಧಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.