ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಆಪ್ತನ ನಿವಾಸದ ಮೇಲೆ ಐಟಿ ದಾಳಿ…

151
firstsuddi

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಆಪ್ತ, ಗುತ್ತಿಗೆದಾರ ಶಿವಕುಮಾರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ಮಧ್ಯಾಹ್ನ 12:30 ರ ಸುಮಾರಿಗೆ 8 ಮಂದಿ ಅಧಿಕಾರಿಗಳ ತಂಡ ಮಧ್ಯರಾತ್ರಿ 1 ಗಂಟೆಯವರೆಗೆ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ನಾನು ರೇವಣ್ಣ ಅವರ ಜೊತೆಯಲ್ಲಿ ಇದ್ದೇನೆ. ಒಂದು ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ. ಆದರೆ ಹೆಚ್.ಡಿ. ರೇವಣ್ಣ ಅವರ ಆಪ್ತ ಎಂದು ಗುರುತಿಸಿ ನನ್ನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿಲ್ಲ. ಕಾನೂನು ಬದ್ಧವಾಗಿ ಅವರು ಕೇಳಿದ ದಾಖಲೆಗಳನ್ನೆಲ್ಲಾ ನೀಡಿದ್ದೇನೆ. ಇಂದು ನನ್ನನ್ನು ಆದಾಯ ತೆರಿಗೆ ಇಲಾಖೆಗೆ ಬರಲು ಹೇಳಿದ್ದಾರೆ. ಈ ವರ್ಷ ನಾನು ಈಟಿ ರಿಟರ್ನ್ ಮಾಡಿರಲಿಲ್ಲ. ಹೀಗಾಗಿ ಪೆನಾಲ್ಟಿ ಹಾಕುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.