ಹಾಸನ : ಯುವತಿಯನ್ನು ಅಪಹರಿಸಿ ಕಾರಿನಲ್ಲೇ ಬಲವಂತವಾಗಿ ತಾಳಿ ಕಟ್ಟಿದ ಕಿರಾತಕ…

1124

ಹಾಸನ : ಬಸ್‍ಗಾಗಿ ಕಾಯುತ್ತಿದ್ದ ಯುವತಿಯನ್ನು ಅಪಹರಿಸಿ ಬಲವಂತವಾಗಿ ಕಾರಿನಲ್ಲೇ ಯುವತಿಗೆ ತಾಳಿ ಕಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ. ಯುವತಿಯ ಅತ್ತೆ ಮಗನಾದ ಮನು ಎಂಬುವವರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಸದ್ಯ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮನು ಎಂಬುವವರು ತನ್ನ ಅತ್ತೆ ಮಗಳನ್ನು ಪ್ರೀತಿಸುತ್ತಿದ್ದರು. ಆದರೆ ಯುವತಿ ಮನು ಅವರನ್ನು ಪ್ರಿತಿಸಲು ನಿರಾಕರಿಸಿದ್ದರು. ಹೀಗಾಗಿ ಯುವತಿ ಬಸ್‍ಗಾಗಿ ಕಾಯುತ್ತಿದ್ದ ವೇಳೆ ಕಾರಿನಲ್ಲಿ ಬಂದು ಯುವತಿಯನ್ನು ಅಪಹರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾರೆ. ಈ ಕುರಿತು ಯುವತಿಯ ಪೋಷಕರು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.