ಹಾಸನ : ಕೆ.ಎಸ್.ಆರ್.ಟಿ.ಸಿ ಬಸ್ ಯುವತಿಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಬಸ್ ನಿಲ್ದಾಣದ ಬಳಿ ನಡೆದಿದೆ. ಚನ್ನಪಟ್ಟಣ ಬಡಾವಣೆಯ ನಿವಾಸಿ ರೇಷ್ಮಾ(25) ಗಾಯಗೊಂಡ ಯುವತಿ ಎಂದು ತಿಳಿದು ಬಂದಿದ್ದು, ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆಗೆ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಡಿಕ್ಕಿಯಾದ ಬಸ್ ಯುವತಿಯ ಬಲಗೈ ಮೇಲೆ ಹರಿದಿದ್ದು, ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










