ಹಾಸನ : ರಸ್ತೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ, ವಾಹನ ಸವಾರರ ಪರದಾಟ…

226
firstsuddi

ಹಾಸನ : ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಯಿಂದ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿರುವ ಘಟನೆ ಬಿಸಿಲೆ ಘಾಟ್ ಮಾರ್ಗದಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದಲೂ ಬಿಸಿಲೆ ಘಾಟ್ ಮಾರ್ಗದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಬಿಸಿಲೆ ಮೂಲಕ ಸುಬ್ರಹ್ಮಣ್ಯ, ಮಂಗಳೂರಿಗೆ ತೆರಳುವ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಅಸ್ಥವ್ಯಸ್ಥವಾಗಿದೆ. ಬೆಳಿಗ್ಗೆಯಾದರೂ ಮರ ತೆರವುಗೊಳಿಸದ ಹಿನ್ನೆಲೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ನಡು ರಸ್ತೆಯಲ್ಲಿ ನೂರಾರು ಜನರು ಸಿಲುಕಿ ರಾತ್ರಿಯಿಡಿ ಪರದಾಡುವಂತಾಗಿತ್ತು.