ಹಾಸನ: ಈ ಬಾರಿ ಹಾಸನ ಕ್ಷೇತ್ರದಲ್ಲಿ ಯಾರು ಜೆಡಿಎಸ್ ಅಭ್ಯರ್ಥಿಯಾಗುತ್ತಾರೆ ಎಂಬ ಕುತೂಹಲ ಕ್ಷೇತ್ರದ ಜನರನ್ನು ಕಾಡುತ್ತಿದೆ. ಈ ನಡುವೆ ನಾನೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪತ್ನಿ, ಭವಾನಿ ರೇವಣ್ಣ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ.
ಇಂದು ಹಾಸನ ತಾಲೂಕಿನ ಸಾಲಗಾಮೆ ಹೋಬಳಿ ಕಕ್ಕೇನಹಳ್ಳಿ ಗ್ರಾಮದಲ್ಲಿ ಅಣ್ಣಪ್ಪಸ್ವಾಮಿ ದೇವಾಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಭವಾನಿ ರೇವಣ್ಣ ಅವರು, ಜೆಡಿಎಸ್ ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ಪಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗಲಿದೆ ಎಂದಿದ್ದಾರೆ.
ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ನಮ್ಮ ಕೈತಪ್ಪಿ ಹೋಗಿದ್ದರಿಂದ ಅನೇಕ ಕೆಲಸ ಕಾರ್ಯಗಳು ಹಾಗೆಯೇ ಉಳಿದಿವೆ. ಅವುಗಳನ್ನು ಪೂರ್ಣಗೊಳಿಸಬೇಕಿದೆ. ಮುಂದಿನ 90 ದಿನಗಳಲ್ಲಿ ಚುನಾವಣೆ ಮುಗಿದು ಹೋಗಲಿದ್ದು, ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಿ ಎಂದು ಹೇಳಿದ್ದಾರೆ.










