ಹಾಸನ : ಸಾರಿಗೆ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ…

568
firstsuddi

ಹಾಸನ: ಸಾರಿಗೆ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ವಿಕಾಸ್(31) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಕಾರಿನಲ್ಲಿದ್ದ ವಿದ್ಯಾ ಹಾಗೂ ಮಂಜುನಾಥ್ ಎಂಬುವವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದ್ದು, ಬೆಂಗಳೂರು ಮೂಲದ ಮಂಜುನಾಥ್ ಹಾಗೂ ವಿದ್ಯಾ ಧರ್ಮಸ್ಥಳಕ್ಕೆ ತೆರುಳುತ್ತಿದ್ದರು ಎಂದು ತಿಳಿದು ಬಂದಿದ್ದು, ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.