ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ : ಮುಖ್ಯ ಶಿಕ್ಷಕ ಅಮಾನತು…

67
firstsuddi

ಮಂಡ್ಯ : ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಡಿ ಬಂಧಿತನಾಗಿರುವ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚಿನ್ಮಯಾನಂದ ಮೂರ್ತಿಯನ್ನು ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿ ನಿಲಯದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೆಲ್ಲ ಸೇರಿ ಹಿಗ್ಗಾಮುಗ್ಗ ಥಳಿಸಿದ್ದರು. ಈ ಘಟನೆ ತಿಳಿದು ಗ್ರಾಮಸ್ಥರು ಶಿಕ್ಷಕನನ್ನು ಹಿಡಿದು ಪೊಲೀಸರಿಗೆ ನೀಡಿದ್ದರು. ಆರೋಪಿ ಮುಖ್ಯ ಶಿಕ್ಷಕನನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಇದೀಗ ಬಂಧನಕ್ಕೆ ಒಳಗಾದ ಶಿಕ್ಷಕನನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿದೆ.