ಕಲಬುರಗಿ: ಹಾಸ್ಟೇಲ್‌ನಲ್ಲೇ ನೇಣು ಬಿಗಿದುಕೊಂಡು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ.
ಇನ್ನೂ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯ ಹೆಸರು ತಿಳಿದು ಬಂದಿಲ್ಲ. ಘಟನೆ ಸಂಬಂಧ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










