ಹಾಸ್ಯ ನಟ ಅಲ್ಲು ರಮೇಶ್ ವಿಧಿವಶ…

57
firstsuddi

ತೆಲುಗು ಸಿನಿಮಾ ರಂಗದ ಖ್ಯಾತ ಹಾಸ್ಯನಟ ಅಲ್ಲು ರಮೇಶ್ ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದಾರೆ.

ತೆಲುಗಿನ ಹಾಸ್ಯ ನಟ ಅಲ್ಲು ರಮೇಶ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ರಂಗಭೂಮಿ ಹಿನ್ನೆಲೆಯ ರಮೇಶ್, ವಿಶಾಖಪಟ್ಟಣದಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಆನಂತರ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಅಲ್ಲು ರಮೇಶ್ ಹಲವು ವೆಬ್ ಸಿರೀಸ್ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. ನೆಪೋಲಿಯನ್, ಮಧುರಾ ವೈನ್ಸ್, ರಾವಣ ದೇಶಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ.

ಯೂಟ್ಯೂಬ್‌ನಲ್ಲಿ ಪ್ರಸಾರವಾಗುವ ‘ಮಾ ವಿದಾಕುಲು’ ವೆಬ್ ಸರಣಿಯಲ್ಲಿ ನಟಿಸುವ ಮೂಲಕ ಅವರು ಹೆಚ್ಚು ಗುರುತಿಸಿಕೊಂಡಿದ್ದರು. ಅಲ್ಲು ರಮೇಶ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅಗಲಿದ ನಟನಿಗೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.