ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾಲಯ ನಡೆಸಿದ ಹಿಂದಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿನ್ನೆಲೆಯಲ್ಲಿ ನಗರದ ಸಂತ ಜೋಸೆಫರ ಪ್ರಥಮದರ್ಜೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ ಆಯಿಷ ಸಿದ್ಧಿಕ ಅವರಿಗೆ ಚಿನ್ನದ ಪದಕ ಲಭಿಸಿದೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್ ಹ್ಲೋಟ್ ಅವರು ಆಯಿಷ ಸಿದ್ಧಿಕ ಅವರಿಗೆ ಚಿನ್ನದ ಪದಕ ನೀಡಿದರು.










