ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಕೊಲೆ – ಮೂವರು ಆರೋಪಿಗಳ ಬಂಧನ…

360
firstsuddi

ಮಂಗಳೂರು: ಗಣೇಶೋತ್ಸವ ಪೆಂಡಲ್ ಒಳಗೆ ನುಗ್ಗಿ ಪುತ್ತೂರು ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲರನ್ನು ಕೊಲೆಗೈದ ಆರೋಪದ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಆರ್ಯಾಪು ಗ್ರಾಮದ ಚರಣ್ (26 ವರ್ಷ), ಈತನ ಸಹೋದರ ಕಿರಣ್ (36 ವರ್ಷ) ಮತ್ತು ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ (28 ವರ್ಷ) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 3 ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಗಣೇಶೋತ್ಸವ ನಡೆಯುತ್ತಿದ್ದಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಕಾರ್ತಿಕ್ ಮೇರ್ಲ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಸ್ತುತ ತನಿಖೆ ಪ್ರಗತಿಯಲ್ಲಿದೆ.