ಹಿಂಬದಿಯಿಂದ ಲಾರಿಗೆ ಬುಲೆರೋ ವಾಹನ ಡಿಕ್ಕಿ: ಇಬ್ಬರು ಸಾವು…

41
firstsuddi

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಬುಲೆರೋ ವಾಹನ ಚಾಲಕನಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.