ಮಂಗಳೂರು : ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ನಿನ್ನೆ ವಿದ್ಯಾರ್ಥಿನಿಯರು ಹಿಜಾಬ್ ನೊಂದಿಗೆ ಕಾಲೇಜು ಪ್ರವೇಶಿಸಲು ಹಠ ಹಿಡಿದರು. ಹಿಜಾಬ್ ಗೆ ಪಟ್ಟು ಹಿಡಿದು ಕುಳಿತ 24 ವಿದ್ಯಾರ್ಥಿನಿಯರಿಗೆ 1 ವಾರ ತರಗತಿಗೆ ನಿರ್ಬಂಧ ಹೇರಲಾಗಿದೆ.
ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪು, ಸರ್ಕಾರದ ಸುತ್ತೋಲೆ, ಕಾಲೇಜು ಅಭಿವೃದ್ಧಿ ಸಮಿತಿ ಕೈಗೊಂಡ ನಿರ್ಣಯದ ಆಧಾರದಲ್ಲಿ ಸಮವಸ್ತ್ರ ನಿಯಮಾವಳಿಯನ್ನು ಉಲ್ಲಂಘಿಸುತ್ತಾ ಕಾಲೇಜಿನ ಕಲಿಕಾ ವಾತಾವರಣವನ್ನು ಹಾನಿಗೊಳಿಸುತ್ತಿರುವ 24 ವಿದ್ಯಾರ್ಥಿನಿಯರಿಗೆ ಮುಂದಿನ ಒಂದು ವಾರದ ಕಾಲ ತರಗತಿಗೆ ನಿರ್ಬಂಧ ವಿಧಿಸುವ ನಿರ್ಣಯವನ್ನು ಸಭೆಯಲ್ಲಿ ಕೈಗೊಂಡರು. ಇದೇ ವಿವಾದ ಸಂಬಂಧ ಕೆಲ ದಿನಗಳ ಹಿಂದೆ 7 ವಿದ್ಯಾರ್ಥಿನಿಯರು ಅಮಾನತಾಗಿದ್ದರು.










