ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂನ ಹೊಸ ಪೀಠಕ್ಕೆ…

53
firstsuddi

ನವದೆಹಲಿ : ಕರ್ನಾಟಕ ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೊಸ ಪೀಠಕ್ಕೆ ನೀಡಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಪ್ರಕರಣದ ವಿಚಾರಣೆ ಬಗ್ಗೆ ಇಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಪ್ರಸ್ತಾಪಿಸಿದರು. ಈ ವೇಳೆ ಈ ಅರ್ಜಿಯ ವಿಚಾರಣೆ ಆರಂಭಿಸಬೇಕಿತ್ತು, ಆದರೆ ವಿಚಾರಣೆ ನಡೆಸಬೇಕಿದ್ದ ನ್ಯಾಯಾಧೀಶರ ಪೈಕಿ ಓರ್ವರು ಅನಾರೋಗ್ಯಕ್ಕಿಡಾಗಿದ್ದಾರೆ. ಹೀಗಾಗಿ ವಿಚಾರಣೆ ವಿಳಂಬವಾಗುತ್ತಿದೆ. ಅರ್ಜಿಯನ್ನು ಹೊಸ ಪೀಠಕ್ಕೆ ನೀಡಲು ಯೋಜಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್.ವಿ.ರಮಣ ಹೇಳಿದರು.

ಶಾಲಾ ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.