ಹಿಜಾಬ್ ಧರಿಸಿ ಬರುತ್ತಾರೆಂದು ಮುಸ್ಲಿಂ ಮಹಿಳೆಯರನ್ನು ತುಚ್ಛವಾಗಿ ಕಾಣಬಾರದು : ಮಲಾಲಾ ಯೂಸುಫ್.

75
firstsuddi

ನವದೆಹಲಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇದೇ ಕಾರಣಕ್ಕಾಗಿ ಅನೇಕ ಕಡೆ ಪ್ರತಿಭಟನೆ ಕೂಡ ನಡೆದಿದೆ. ಕರ್ನಾಟಕದಲ್ಲಿನ ಹಿಬಾಬ್-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವದ ಕಿರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್ ಝಾಯಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಹಿಜಾಬ್ ಅಥವಾ ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ. ಹಿಜಾಬ್ ಧರಿಸಿ ಬಂದಿದ್ದಾರೆ ಎಂಬ ಕಾರಣಕ್ಕೆ ಹೆಣ್ಣುಮಕ್ಕಳನ್ನು ಕ್ಲಾಸ್ ಒಳಗೆ ಬಿಡದೆ ಇರುವುದು ನಿಜಕ್ಕೂ ಭಯಾನಕ. ಹೆಣ್ಣು ಮಕ್ಕಳು ಕಡಿಮೆ ಅಥವಾ ಹೆಚ್ಚು ಬಟ್ಟೆ ಧರಿಸುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸುವುದು ಯಾವಾಗಿನಿಂದಲೂ ಇದ್ದೇ ಇದೆ. ಆದರೆ ಹಿಜಾಬ್ ಧರಿಸಿ ಬರುತ್ತಾರೆಂದು ಮುಸ್ಲಿಂ ಮಹಿಳೆಯರನ್ನು ತುಚ್ಛವಾಗಿ ಕಾಣಬಾರದು ಎಂದು ಹೇಳಿದ್ದಾರೆ.