ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ : ಸಚಿವ ನಾಗೇಶ್.

66
firstsuddi

ಬೆಂಗಳೂರು : ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟವಾಗಿ ಹೇಳಿದ್ದಾರೆ.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿವಿಧ ಜಿಲ್ಲೆಗಳಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು.

ಇದೀಗ ಸ್ವತಃ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಪ್ರತಿಕ್ರಿಯಿಸಿದ್ದು, ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಮಾರ್ಚ್ 9 ರಿಂದ 29ರವರೆಗೆ ಪರೀಕ್ಷೆ ನಡೆಯಲಿದೆ.