ಹಿಜಾಬ್ ಪ್ರಕರಣ ; ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ.

79
firstsuddi

ನವದೆಹಲಿ : ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿತು.

ಇದೇ ಸಂದರ್ಭದಲ್ಲಿ ಹೆಚ್ಚಿನ ವಿವರಣೆ ಕೇಳಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದ್ದು, ವಿಚಾರಣೆ ಮುಂದೂಡುವಂತೆ ಕೋರುವ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ.

ಶಾಲಾ-ಕಾಲೇಜುಗಳ ಏಕರೂಪ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.