ಕುಂದಾಪುರ : ಹೈಕೋರ್ಟ್ ತೀರ್ಪಿನ ಬಳಿಕ ತಾಲೂಕಿನಲ್ಲಿ ಮತ್ತೆ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಕುಂದಾಪುರದ ಜೂನಿಯರ್ ಕಾಲೇಜು ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಇಂದು ಶಾಂತಿಯುತವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಆಗಮಿಸಿದ್ದಾರೆ. ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ 11 ವಿದ್ಯಾರ್ಥಿನಿಯರು ತರಗತಿಗೆ ಗೈರಾಗಿದ್ದಾರೆ. ಹಿಜಾಬ್ ಪರ ಹೋರಾಟ ನಿರತ ಇಬ್ಬರು ವಿದ್ಯಾರ್ಥಿನಿಯರು ತರಗತಿಗೆ ಆಗಮಿಸಿದ್ದು, ವಿದ್ಯಾರ್ಥಿನಿಯರಿಗೆ ಹಿಜಾಬ್ ತೆರವುಗೊಳಿಸಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿನಿಯರು ಅಲ್ಲಿ ಹಿಜಾಬ್ ತೆಗೆದು ತರಗತಿಗೆ ತೆರಳಿದ್ದಾರೆ. ಉಳಿದೆಡೆ ಸಾಮಾನ್ಯವಾಗಿ ಎಲ್ಲರೂ ಕಾಲೇಜಿಗೆ ಆಗಮಿಸಿದ್ದಾರೆ.










