ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು : ಯದುವೀರ್.

119
firstsuddi

ಮೈಸೂರು : ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿ ಇದೆ. ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿ ಇರಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ ಎಂದರು.

ಟಿಪ್ಪು ಎಕ್ಸ್ ಪ್ರೆಸ್ ಗೆ ಚಾಮರಾಜ ಒಡೆಯರ್ ಮರುನಾಮಕರಣ ಮಾಡುವ ವಿಚಾರದ ಕುರಿತು ಮಾತನಾಡಿದ ಅವರು, ರೈಲ್ವೆ ಕ್ಷೇತ್ರಕ್ಕೆ ಚಾಮರಾಜ ಒಡೆಯರ್ ಕೊಡುಗೆ ಅಪಾರ. ಒಡೆಯರ್ ಹೆಸರು ಪ್ರಸ್ತಾಪವಾಗಿರುವುದೇ ಸಂತಸದ ವಿಷಯ. ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರೂ ಸಮ್ಮತ ಎಂದು ತಿಳಿಸಿದರು.