ಬೆಂಗಳೂರು : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಹಿಜಾಬ್ ವಿವಾದದ ತೀರ್ಪು ಕರ್ನಾಟಕ ಹೈಕೋರ್ಟ್ನಿಂದ ಇಂದು ಹೊರ ಬೀಳಲಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.
ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ 11 ದಿನಗಳ ಕಾಲ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.










