ಹಿಜಾಬ್ ವಿವಾದ : ಸುಪ್ರೀಂ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು.. ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ

61
firstsuddi

ನವದೆಹಲಿ : ಹಿಜಾಬ್ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದೆ. ಹೀಗಾಗಿ ಪ್ರಕರಣವು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ ವರ್ಗಾವಣೆಯಾಗಿದೆ.

ನ್ಯಾ. ಹೇಮಂತ್ ಗುಪ್ತಾ ಅವರು ಹಿಜಾಬ್ ನಿಷೇಧದ ಪರ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದ್ದಾರೆ. ಆದರೆ ನ್ಯಾ. ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನ ಆದೇಶವನ್ನು ರದ್ದು ಮಾಡುವ ಪರವಾಗಿ ತೀರ್ಪು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣವು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರ ಮುಂದೆ ಬರಲಿದೆ. ಪ್ರಕರಣದ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿಗಳು ವಿಸ್ತೃತ ನ್ಯಾಯಪೀಠ ರಚಿಸುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಹಿಜಾಬ್ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ನಂತರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು.