ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ನಿಧನ…

106
firstsuddi

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ(76) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ನಸುಕಿನ ಜಾವ ಅವರ ನಿವಾಸ ಬನಶಂಕರಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರೆ, ತಾಯಿ ಸಂತಾನಲಕ್ಷ್ಮಿ ಗೃಹಿಣಿ. ಜಯಂತಿಯವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ವೈ.ಆರ್ ಪುಟ್ಟಸ್ವಾಮಿಯವರ ‘ಜೇನುಗೂಡು’ ಚಿತ್ರದ ಮೂಲಕ. ಅಲ್ಲಿಂದಲೇ ಕಮಲಾ ಕುಮಾರಿ ಜಯಂತಿಯಾಗಿದ್ದು. ಕನ್ನಡ, ತೆಲುಗು, ತಮಿಳು, ಮರಾಠಿ, ಹಿಂದಿ ಮತ್ತು ಮಲಯಾಳಂ ಭಾಷೆಯ ಒಟ್ಟು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಡಾ. ರಾಜ್ ಕುಮಾರ್ ಜೊತೆಯಲ್ಲಿ 45 ಚಿತ್ರಗಳಲ್ಲಿ ಅಭಿನಯಿಸಿದ್ದರು.