ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೃದಯ ಬಡಿತದಲ್ಲಿ ಏರುಪೇರಾದ ಹಿನ್ನೆಲೆ ಇಂದು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶಾಶ್ವತ ಪೇಸ್ ಮೇಕರ್ ಅಳವಡಿಸುವ ಕಾರ್ಯ ನಡೆದಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯಕೀಯ ಪ್ರಕ್ರಿಯೆ ಪೂರ್ಣವಾಗಿದ್ದು, ದೊಡ್ಡಣ್ಣ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಜಯದೇವ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.










