ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ- ಆಸ್ಪತ್ರೆಗೆ ದಾಖಲು…

78
firstsuddi

ಕನ್ನಡ ಸಿನಿಮಾ ರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್, ‘ಹೆದರುವ ಅಗತ್ಯವಿಲ್ಲ. ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಜನಾರ್ದನ್, ಹಾಸ್ಯ ಹಾಗೂ ವಿಲನ್ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ.