ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ನಟ ಶರತ್ ಬಾಬು(71) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹೊರಬಂದಿಲ್ಲ. ಶರತ್ ಬಾಬು ಅವರನ್ನು ನೋಡಲು ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಅಭಿಮಾನಿಗಳು ಕೂಡ ಶರತ್ ಬಾಬು ಆರೋಗ್ಯದಲ್ಲಿ ಶೀಘ್ರದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.
ಶರತ್ ಬಾಬು ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.










