ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಅವರ ನಿಧನಕ್ಕೆ ಸಿಎಂ ಬಿಎಸ್‍ವೈ ಸಂತಾಪ…

124
firstsuddi

ಬೆಂಗಳೂರು : ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.