ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ವಿಧಿವಶ…

108
firstsuddi

ಬಳ್ಳಾರಿ : ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್(82) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸುಭದ್ರಮ್ಮ ಅವರನ್ನು ನಿನ್ನೆ ತಡರಾತ್ರಿ ವಿಮ್ಸ್ ಆಸ್ಪತ್ರೆಗೆ ರವಾನಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ತಮ್ಮ 27ನೇ ವಯಸ್ಸಿಗೆ ರಂಗಭೂಮಿ ಪ್ರವೇಶಿಸಿದ ಸುಭದ್ರಮ್ಮ ಅವರು ಸತತ 50 ವರ್ಷಗಳ ಕಾಲ ರಂಗಭೂಮಿಯಲ್ಲಿ ಮಿಂಚಿದ್ದಾರೆ. ಇವರಿಗೆ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಗುಬ್ಬಿ ವೀರಣ್ಣ ಪ್ರಶಸ್ತಿ, ಹಂಪಿ ಕನ್ನಡ ವಿವಿಯ ನಾಡೋಜ, ರಾಜ್ಯೋತ್ಸವ, ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ದೊರಕಿವೆ.