ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರ ಪತ್ನಿ ಲಲಿತಮ್ಮ(90) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ 2 ದಿನಗಳಿಂದ ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧನರಾಗಿದ್ದು, ಇದೀಗ ಜಯನಗರದ 6ನೇ ಬ್ಲಾಕ್ನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಅವರ ದೇಹವನ್ನು ಕೆಂಪೇಗೌಡ ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.










