ಹೀರೋ ಮೋಟೋಕಾರ್ಪ್ ಅಧ್ಯಕ್ಷ ಕಚೇರಿ, ನಿವಾಸದ ಮೇಲೆ ಐಟಿ ದಾಳಿ…

61

ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಅವರ ನಿವಾಸ ಮತ್ತು ಕಚೇರಿ ಮೇಲೆ ಐಟಿ ದಾಳಿ ನಡೆಸಿದೆ.

ಇಂದು ಮುಂಜಾನೆ ಐಟಿ ಇಲಾಖೆ ಪವನ್ ಮುಂಜಾಲ್ ಅವರ ಗುರುಗ್ರಾಮದಲ್ಲಿರುವ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದೆ. ಪವನ್ ಮುಂಜಾಲ್ ಮತ್ತು ಕಂಪನಿಯ ಇತರ ಹಿರಿಯ ಅಧಿಕಾರಿಗಳು ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ ಹಲವಾರು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಶೋಧ ನಡೆಸುತ್ತಿದೆ.

ಮೋಟೋಕಾರ್ಪ್ ಮತ್ತು ಅದಕ್ಕೆ ಸಂಬಂಧಿಸಿದವರ ಹಣಕಾಸು ದಾಖಲೆಗಳು ಮತ್ತು ಇತರ ವಹಿವಾಟುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.