‘ಹೀರೋ’ ಸಿನಿಮಾಕ್ಕೆ ಪೈರಸಿ ಕಾಟ : ಬೇಸರ ವ್ಯಕ್ತಪಡಿಸಿದ ರಿಷಬ್ ಶೆಟ್ಟಿ!

97
Firstsuddi

ರಿಷಭ್ ಶೆಟ್ಟಿ ನಿರ್ಮಿಸಿ ನಟಿಸಿರುವ ‘ಹೀರೋ’ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿತ್ತು. ಆದರೆ ಇದೀಗ 3ನೇ ದಿನಕ್ಕೆ ಚಿತ್ರ ಪೈರಸಿ ಆಗಿದ್ದು, ನಟ ರಿಷಬ್ ಶೆಟ್ಟಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಕೋವಿಡ್-19 ಲಾಕ್ಡೌನ್ ಸಂದರ್ಭದಲ್ಲೂ ಕೂಡ ಜನರಿಗೆ ಮನರಂಜನೆ ನೀಡುವ ಉದ್ದೇಶದಿಂದ ಸಿನಿಮಾ ಮಾಡಿದ್ವಿ, ಸಿನಿಮಾ ಬಿಡುಗಡೆಯಾಗಿ ಒಳ್ಳೆಯ ರೆಸ್ಪಾನ್ಸ್ ಕೂಡ ಪಡೆದುಕೊಂಡಿತ್ತು. ಆದರೆ ಇಂತಹ ಸಮಯದಲ್ಲಿ ಪೈರಸಿ ಎದುರಾಗಿದೆ. ಪೈರಸಿ ವಿಚಾರದಲ್ಲಿ ಚಿತ್ರಮಂದಿರಗಳ ಮಾಲೀಕರ ಬಗ್ಗೆಯೂ ರಿಷಬ್ ಶೆಟ್ಟಿ ಅಸಮಾಧಾನ ಹೊರಹಾಕಿದ್ದು, ಚಿತ್ರಮಂದಿರಗಳಲ್ಲಿ ಕ್ಯಾಮೆರಾ, ಮೊಬೈಲ್ ತೆಗೆದುಕೊಂಡು ರೆಕಾರ್ಡ್ ಮಾಡೋದಕ್ಕೆ ಹೇಗೆ ಅನುವು ಮಾಡಿಕೊಡುತ್ತಾರೆ ಎಂದಿದ್ದಾರೆ. ಇದೇ ವೇಳೆ ಪೈರಸಿ ವೆಬ್ ಸೈಟ್ ಗಳ ನಿಷೇಧ ಯಾಕೆ ಆಗ್ತಿಲ್ಲ ಎಂದು ರಿಷಬ್ ಅವರು ಪ್ರಶ್ನಿಸಿದ್ದಾರೆ.

ಒಂದು ವರ್ಷದ ನಂತರ ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿರಬೇಕಾದ್ರೆ ಪೈರಸಿ ಕಾಟ ಮತ್ತೆ ಚಿತ್ರರಂಗಕ್ಕೆ ಮುಳುವಾಗಿದ್ದು, ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದ ಹೀರೋ ಸಿನಿಮಾ ಬಿಡುಗಡೆಯಾದ ಮೂರೇ ದಿನಕ್ಕೆ ಪೈರಸಿ ಆಗಿದ್ದು, ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಚಿತ್ರತಂಡ ದೂರನ್ನು ದಾಖಲಿಸಿದ್ದು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.