ಹುಚ್ಚುನಾಯಿ ದಾಳಿಯಿಂದ 35ಕ್ಕೂ ಹೆಚ್ಚು ಜನರಿಗೆ ಗಾಯ…

96
firstsuddi

ಮೈಸೂರು : ಹುಚ್ಚು ನಾಯಿಗಳ ದಾಳಿಯಿಂದಾಗಿ 35ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ.

ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಹುಚ್ಚು ನಾಯಿಗಳು ದಾಳಿ ಮಾಡಿ, 35 ಕ್ಕೂ ಹೆಚ್ಚು ಜನರಿಗೆ ಕಚ್ಚಿವೆ. ಹುಚ್ಚುನಾಯಿ ಕಡಿತಕ್ಕೆ ಒಳಗಾದ ಹಲವು ಮಂದಿ ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲಾ ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರು ಒಳ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬೆನ್ನಲ್ಲೇ ಕೂಡಲೇ ಸಂಬಂಧ ಪಟ್ಟ ಇಲಾಖೆ ತಕ್ಷಣ ನಾಯಿಗಳನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.