ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ.

81
firstsuddi

ಚಾಮರಾಜನಗರ : ಉಪನ್ಯಾಸಕಿಯೊಬ್ಬರು ತಮ್ಮ ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ
ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ (26) ಆತ್ಮಹತ್ಯೆ ಮಾಡಿಕೊಂಡವರು. ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯಾಗಿದ್ದ ಇವರು, ಡೆತ್​ನೋಟ್ ಬರೆದಿಟ್ಟು ಚಾಮರಾಜನಗರದ ಜೆಎಸ್ಎಸ್ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ಮಾನಸಿಕ ಒತ್ತಡದಿಂದ ತಾನು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದುಕೊಂಡಿದ್ದಾರೆ. ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.