ನಟಿ ಸಮಂತಾ ಸದ್ಯ `ಶಾಕುಂತಲಂ’ ಚಿತ್ರ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಮಾಜಿ ಪತಿ ನಾಗ ಚೈತನ್ಯ- ಶೋಭಿತಾ ಅವರ ಡೇಟಿಂಗ್ ಬಗ್ಗೆ ಮಾತನಾಡಿದ್ದಾರೆ.
ಇತ್ತೀಚಿನ ಸಂದರ್ಶನದಲ್ಲಿ ಮಾತನಾಡಿರುವ ಸಮಂತಾ, ಯಾರು ಯಾರ ಜೊತೆ ರಿಲೇಶನ್ಶಿಪ್ ಇಟ್ಟುಕೊಂಡಿದ್ದಾರೆ ಎಂಬ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಪ್ರೀತಿಯ ಮೌಲ್ಯವನ್ನು ತಿಳಿಯದವರು ಎಷ್ಟು ಜನರ ಜೊತೆ ಡೇಟ್ ಮಾಡಿದರೂ ಕಣ್ಣೀರು ಹಾಕುತ್ತಾರೆ. ಕನಿಷ್ಠ ಆ ಹುಡುಗಿಯಾದರೂ ಸಂತೋಷವಾಗಿರಬೇಕು. ಅವರು ತಮ್ಮ ನಡವಳಿಕೆಯನ್ನು ಬದಲಾಯಿಸಿಕೊಂಡು ಹುಡುಗಿಯನ್ನು ನೋಯಿಸದಂತೆ ನೋಡಿಕೊಂಡರೆ ಎಲ್ಲರಿಗೂ ಒಳ್ಳೆಯದು ಎಂದು ಸಮಂತಾ ಹೇಳಿದ್ದಾರೆ. ಸಮಂತಾ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.










