ಶ್ರೀನಗರ : ಜೂನ್ 12 ರಂದು ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅನಂತ್‍ನಾಗ್‍ನ ಎಸ್‍ಎಚ್‍ಒ ಅರ್ಷದ್ ಖಾನ್ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದು, ಗೃಹ ಸಚಿವ ಅಮಿತ್ ಶಾ ಅವರು ಹುತಾತ್ಮ ಪೊಲೀಸ್ ಅಧಿಕಾರಿ ಅರ್ಷದ್ ಖಾನ್ ಅವರ ಮನೆಗೆ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದು, ಯೋಧರ ಬಲಿದಾನವನ್ನು ನಾವು ಯಾವುದೇ ಕಾರಣಕ್ಕೂ ವ್ಯರ್ಥವಾಗಲು ಬಿಡುವುದಿಲ್ಲ. ನಿಮ್ಮ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಭರವಸೆಯನ್ನು ನೀಡಿದ್ದಾರೆ.










