ಹುಬ್ಬಳ್ಳಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂ. ನಗದು ಪತ್ತೆಯಾದ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ 3 ಕೋಟಿ ರೂ. ನಗದು ಪತ್ತೆಯಾಗಿದೆ.
ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಉದ್ಯಮಿ ರಮೇಶ್ ಬೊಣಗೇರಿ ನಿವಾಸದ ಮೇಲೆ ಸಿಸಿಬಿ ಡಿವೈಎಸ್ ಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂರು ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮೇಶ್ ಬೊಣಗೇರಿ ಕೃಷಿ ಇಲಾಖೆಗೆ ರಾಸಾಯನಿಕ ಸರಬರಾಜು ಮಾಡುತ್ತಿದ್ದ ಉದ್ಯಮಿಯಾಗಿದ್ದಾರೆ.










