ಹುಬ್ಬಳ್ಳಿ ಕಾಂಗ್ರೆಸ್ ಕಚೇರಿ ಮುಂದೆ ಯುವಕನ ಬರ್ಬರ ಕೊಲೆ…

46
firstsuddi

ಹುಬ್ಬಳ್ಳಿ: ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ಬರ್ಬರ ಹತ್ಯೆ ನಡೆದಿದೆ.

ಕೊಲೆಯಾದ ಯುವಕನನ್ನು ಮಾರುತಿನಗರದ ನಿವಾಸಿ ವಿಜಯ ಬಸವ (25) ಎಂದು ಗುರುತಿಸಲಾಗಿದೆ. ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಯುವಕನನ್ನು ಕಲ್ಲು ಎತ್ತಿ ಹಾಕಿ ಕೊಲೆಗೈದ ದುಷ್ಕರ್ಮಿಗಳು, ಶವಕ್ಕೆ ಬೆಂಕಿ ಹಚ್ಚಿದ್ದಾರೆ. ಕಾರವಾರ ರಸ್ತೆಯ ಎಂಟಿಎಸ್ ಕಾಲೊನಿಯ ಪಾಳು ಜಾಗದಲ್ಲಿ ಘಟನೆ ನಡೆದಿದೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ ನಂತರ ಭೀಕರವಾಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.