ಹುಬ್ಬಳ್ಳಿ : ಕೋವಿಡ್ ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಶೋಕ್ ಹಲಗಿ ಬಂಧಿತ ಆರೋಪಿ. ನಗರದ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೊಂಕಿತ ಮಹಿಳೆಯ ಮೇಲೆ ವಾರ್ಡಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಸೋಂಕಿತ ಮಹಿಳೆ ಪುತ್ರನಿಗೆ ಮಾಹಿತಿ ನೀಡಿದ್ದಳು. ಘಟನೆ ಸಂಬಂಧ ಸೊಂಕಿತ ಮಹಿಳೆಯ ಪುತ್ರ ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಘಟನೆಯ ಬಗ್ಗೆ ತನಿಖೆ ನಡೆಸಿದ ವಿದ್ಯಾನಗರ ಪೋಲೀಸರು ವಾರ್ಡ್ ಬಾಯ್ ಅಶೋಕ ಹಲಗಿಯನ್ನ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.
ಘಟನೆ ಕುರಿತು ಮೇ 23ರಂದು ಪ್ರಕರಣ ದಾಖಲಾಗಿತ್ತು. ಘಟನೆ ಬಳಿಕ ವಾರ್ಡ್‍ಬಾಯ್ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಅಲ್ಲದೇ ಆಸ್ಪತ್ರೆಯಿಂದ ಪರಾರಿಯಾಗಿ ಅಪಘಾತದಲ್ಲಿ ಗಾಯಗೊಂಡಿದ್ದ. ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿ ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.










